Menu

ದೀಪಾವಳಿಗಾಗಿ 18 ಸಾವಿರ ವಿಶೇಷ ರೈಲುಗಳ ಸಂಚಾರ- ಸಚಿವ ಅಶ್ವಿನಿ ವೈಷ್ಣವ್ ಘೋಷಣೆ

ಉದಯಕಾಲ ನ್ಯೂಸ್, ಜೈಪುರ (ರಾಜಸ್ಥಾನ): ದೇಶಾದ್ಯಂತ ದೀಪಾವಳಿ, ದುರ್ಗಾ ಪೂಜೆ ಹಾಗೂ ಛತ್ ಹಬ್ಬಗಳ ಹಬ್ಬದ ಋತುವಿನಲ್ಲಿ ಪ್ರಯಾಣಿಕರ ದಟ್ಟಣೆಯನ್ನು ಸಮರ್ಥವಾಗಿ ನಿಭಾಯಿಸಲು ಭಾರತೀಯ ರೈಲ್ವೆ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಪ್ರಯಾಣಿಕರ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕಾಗಿ ಈ ಬಾರಿ ದೇಶಾದ್ಯಂತ ಬರೋಬ್ಬರಿ 18,000 ವಿಶೇಷ ರೈಲುಗಳು ಕಾರ್ಯಾಚರಣೆ ನಡೆಸಲಿವೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ರಾಜಸ್ಥಾನದ ಜೈಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಬ್ಬದ

ಮಧ್ಯರಾತ್ರಿಯಿಂದಲೇ ಬಸ್ ಪ್ರಯಾಣ ದರ ಹೆಚ್ಚಳ– ಕೆಎಸ್‌ಆರ್‌ಟಿಸಿ ಶೇ.23, ಬಿಎಂಟಿಸಿ ಶೇ.35ರಷ್ಟು ಏರಿಕೆ

ಉದಯಕಾಲ ನ್ಯೂಸ್, ಬೆಂಗಳೂರು: ಹಾಲಿನ ದರ ಏರಿಕೆಯ ಬೆನ್ನಲ್ಲೇ ರಾಜ್ಯದ ಬಡ ಹಾಗೂ ಮಧ್ಯಮ ವರ್ಗದ ಜನತೆಗೆ ಮತ್ತೊಂದು ಆರ್ಥಿಕ ಹೊಡೆತ ಬಿದ್ದಿದೆ. ರಾಜ್ಯ ಸರ್ಕಾರಿ ಸಾರಿಗೆ ಬಸ್‌ಗಳ ಪ್ರಯಾಣ ದರವನ್ನು ಅಧಿಕೃತವಾಗಿ ಪರಿಷ್ಕರಿಸಿದ್ದು, ವಾಯುವ್ಯ, ಕಲ್ಯಾಣ ಕರ್ನಾಟಕ ಹಾಗೂ ಕೆಎಸ್‌ಆರ್‌ಟಿಸಿ

ನವೆಂಬರ್ 5 ಗುರುವಾರದಿಂದಲೇ ಹೊಸ ಬಸ್‌ ಟಿಕೆಟ್ ದರ ಜಾರಿ

ಉದಯಕಾಲ ನ್ಯೂಸ್‌, ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ಬೆಲೆ ಏರಿಕೆಯ ಬಿಸಿ ಆರುವ ಮುನ್ನವೇ ಜನಸಾಮಾನ್ಯರಿಗೆ ಮತ್ತೊಂದು ಆಘಾತ ಎದುರಾಗಿದ್ದು, ಈ ವಾರವೇ ರಾಜ್ಯದ ಸಾರಿಗೆ ಬಸ್‌ಗಳ ಪ್ರಯಾಣ ದರ ಹೆಚ್ಚಳವಾಗುವುದು ಖಚಿತಗೊಂಡಿದೆ. ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಬಸ್ ಟಿಕೆಟ್

‘ಜನಶತಾಬ್ದಿ’ ಮತ್ತು ಸಾಮಾನ್ಯ ರೈಲು ವಿಸ್ತರಣೆಗೆ ಪ್ರಯಾಣಿಕರ ತೀವ್ರ ಒತ್ತಾಯ!

ಉದಯಕಾಲ ನ್ಯೂಸ್,ಹುಬ್ಬಳ್ಳಿ: ರಾಜ್ಯದ ವಾಣಿಜ್ಯ ನಗರಿ ಹುಬ್ಬಳ್ಳಿ ಭಾಗಕ್ಕೆ ರೈಲು ಸಂಪರ್ಕವನ್ನು ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಸಾರ್ವಜನಿಕರಿಂದ ಹಾಗೂ ಪ್ರಯಾಣಿಕರಿಂದ ಮಹತ್ವದ ಬೇಡಿಕೆಗಳು ಮುನ್ನೆಲೆಗೆ ಬಂದಿವೆ. ಪ್ರಸ್ತಾವಿತ ಬೆಂಗಳೂರು–ಮುಂಬೈ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್ ರೈಲನ್ನು ಹುಬ್ಬಳ್ಳಿ ಮಾರ್ಗವಾಗಿಯೂ ಸಂಚರಿಸುವಂತೆ ಒತ್ತಾಯ