ಹೊಸ BPL ಕಾರ್ಡ್ಗೆ ಅರ್ಜಿ ಹಾಕಲು ಕಾಯ್ತಿರುವವರಿಗೆ ಗುಡ್ ನ್ಯೂಸ್ !
ಬಿಪಿಎಲ್ ಕಾರ್ಡ್ ಪಡೆಯಲು ಅರ್ಹ ಬಡ ಕುಟುಂಬಗಳು ಕಾಯುತ್ತಿದ್ದು, ಆಹಾರ ಇಲಾಖೆ ಸಚಿವ ರಿಜ್ವಾನ್ ಅರ್ಷದ್ ಅವರು ಹೊಸ ಬಿಪಿಎಲ್ ಕಾರ್ಡ್ಗಳ ಅರ್ಜಿ ಸ್ವೀಕಾರದ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ್ದಾರೆ.
ಬೆಂಗಳೂರು: ರೇಷನ್ ಕಾರ್ಡ್ಗಳ ಕೆವೈಸಿ ಪ್ರಕ್ರಿಯೆ ನಡೆಯುತ್ತಿರುವ ಈ ಸಮಯದಲ್ಲಿ ಹೊಸ ಬಿಪಿಎಲ್ ರೇಷನ್ ಕಾರ್ಡ್ಗಳಿಗೆ ಬೇಡಿಕೆ ಕೂಡ ಹೆಚ್ಚಾಗಿದೆ. ಅನರ್ಹ ಫಲಾನುಭವಿಗಳ ಕಾರ್ಡ್ಗಳನ್ನು ಪರಿಶೀಲಿಸಿ ರದ್ದುಪಡಿಸುವ ಪ್ರಕ್ರಿಯೆ ಕೈಗೊಳ್ಳಲಾಗಿದ್ದರಿಂದ ಹೊಸ ಬಿಪಿಎಲ್ ಕಾರ್ಡ್ಗಳ ವಿತರಣೆ ಸ್ಥಗಿತಗೊಂಡಿತ್ತು. ಇದೀಗ ಬಿಪಿಎಲ್ ಕಾರ್ಡ್ ಪಡೆಯಲು ಕಾಯ್ತಿರುವವರಿಗೆ ಸಚಿವ ರಿಜ್ವಾನ್ ಅರ್ಷದ್ ಅವರು ಗುಡ್ ನ್ಯೂಸ್ ನೀಡಿದ್ದಾರೆ.
ಬಿಪಿಎಲ್ ಕಾರ್ಡ್ ಕುರಿತು ಮಹತ್ವದ ಮಾಹಿತಿ
ಬಿಪಿಎಲ್ ಕಾರ್ಡ್ ಪಡೆಯಲು ಅರ್ಹ ಬಡ ಕುಟುಂಬಗಳು ಕಾಯುತ್ತಿದ್ದು, ಹೊಸ ಬಿಪಿಎಲ್ ಕಾರ್ಡ್ಗಳ ಅರ್ಜಿ ಸ್ವೀಕಾರದ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್ ಅರ್ಷದ್ ಸ್ಪಷ್ಟನೆ ನೀಡಿದ್ದಾರೆ.
ಶೀಘ್ರವೇ BPL ಕಾರ್ಡ್ ಅರ್ಜಿ ಸಲ್ಲಿಕೆಗೆ ಅವಕಾಶ
ಹೊಸ ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಅವಕಾಶ ನೀಡುವ ವಿಚಾರವನ್ನು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಶೀಘ್ರವೇ ಅಧಿಕೃತವಾಗಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡುವುದಾಗಿ ಸಚಿವ ರಿಜ್ವಾನ್ ಅರ್ಷದ್ ಮಾಹಿತಿ ನೀಡಿದ್ದಾರೆ. ಹೀಗಾಗಿ ಅರ್ಹ ಕುಟುಂಬಗಳು ಸರ್ಕಾರದ ಮುಂದಿನ ಅಧಿಕೃತ ಘೋಷಣೆಗಾಗಿ ಕಾತರದಿಂದ ಕಾಯುತ್ತಿದ್ದಾರೆ.
#BPLCard #RationCard #RizwanArshad #KarnatakaGovernment #FoodDepartment #UdayakalaNews #BPLCardApplication #KarnatakaNews


